ದೆಹಲಿ ಉಪ ಮುಖ್ಯಮಂತ್ರಿಯನ್ನು ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದ ಕೋರ್ಟ್
- Krishna Shinde
- 15 Jan 2024 , 2:30 AM
- Delhi
- 136
ದೆಹಲಿ :ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಿನ್ನೆ ಬಂಧಿಸಿದ್ದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು ಸೋಮವಾರ ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.

ಸಿಸೋಡಿಯಾರವರನ್ನು ಇಂದು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದಿಂದ ಅವರನ್ನು ಬಂಧಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.











