ಮನೆಯಲ್ಲಿನ ಸಿಲಿಂಡರ್ ಸ್ಪೋಟ ಓರ್ವ ವ್ಯಕ್ತಿ ಸಾವು
- shivaraj B
- 22 Aug 2024 , 4:49 PM
- Chikodi
- 265
ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಮನೆಯಲ್ಲಿನ ಸಿಲಿಂಡರ್ ಸ್ಪೋಟಗೊಂಡು ಓರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಮೂಲದ ಬೀಡ ಗ್ರಾಮದ ಸೂರ್ಯಕಾಂತ ಸೆಳಕೆ(55) ಮೃತ ದುರ್ದೈವಿಯಾಗಿದ್ದು,
ಮತ್ತೋರ್ವ ಕಾರ್ಮಿಕ ಜ್ಞಾನೋದಯ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸಿಲಿಂಡರ್ ಸ್ಪೋಟದ ತೀವ್ರತೆಗೆ ಪಕ್ಕದ ಮನೆಯ ಗೋಡೆ ಕುಸಿತಗೊಂಡಿದ್ದು, ಗೋಡೆ ಮಕ್ಕಳಿಬ್ಬರ ಮೇಲೆ ಬಿದ್ದು ಇಬ್ಬರೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.