ವಡ್ಡರವಾಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹ

ಬೆಳಗಾವಿ :ನಗರದ ವಡ್ಡರವಾಡಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ಡಾ. ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

promotions

ಕಳೆದ 25 ವರ್ಷಗಳಿಂದ ವಡ್ಡರವಾಡಿ ಪ್ರದೇಶದಲ್ಲಿ ಸುಮಾರು 2,000ಕ್ಕೂ ಅಧಿಕ ಜನಸಂಖ್ಯೆಯಲ್ಲಿ ಜನ ವಾಸ ಮಾಡುತ್ತಿದ್ದಾರೆ. ನಮಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

promotions

ಸುಸಜ್ಜಿತವಾದ ರಸ್ತೆ, ಚರಂಡಿ, ಕುಡಿಯುವ ನೀರು ಇಲ್ಲದೆ ಇಲ್ಲಿನ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ನಾಗರಿಕರು ಅನಾರೋಗ್ಯದಿಂದ ಬಳಲುವಂತಾಗಿದೆ. ಈ ಕುರಿತು ಹಲವಾರು ಬಾರಿ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಒಂದು ವಾರದ ಒಳಗಾಗಿ ವಡ್ಡರವಾಡಿ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಪಿಸದಿದ್ದರೇ, ಉಗ್ರ ಹೋರಾಟ ‌ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

Read More Articles