ಬಿಜೆಪಿ ಪಕ್ಷದ ವಿಚಾರ ನಮಗೆ ಬೇಡ ಎಂದ ಡಿಕೆ
- shivaraj bandigi
- 15 Jan 2024 , 1:38 AM
- Belagavi
- 585
ಬೆಳಗಾವಿ :

ಉತ್ತರ ಕರ್ನಾಟಕದ ಸಮಸ್ಯೆಯ ಕುರಿತು ಯಾರೇ ಶಾಸಕರು ಚರ್ಚಿಸಿದರೂ ಅದಕ್ಕೆ ಸ್ಪಂದಿಸಲು ಸರಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.

ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತಿದೆ. ಈ ಭಾಗದ ಸಮಸ್ಯೆಯ ಬಗ್ಗೆ ಯಾರೇ ಶಾಸಕರು ಚರ್ಚೆ ನಡೆಸಿದರೆ ಅದಕ್ಕೆ ಉತ್ತರ ಕೊಡಲು ಸರಕಾರ ಬದ್ಧವಾಗಿದೆ ಎಂದರು.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕ ಸಮಗ್ರ ಕರ್ನಾಟಕ ನಮ್ಮದ್ದು ವಿಧಾನಸಭೆಯಲ್ಲಿ ಸಹಕಾರ ಕೊಡಲು ನಾವು ಸಿದ್ಧ.ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಪ್ರಸ್ತಾವನೆ ಬರಲಿ ಖಂಡಿತವಾಗಿ ಚರ್ಚೆ ಮಾಡುತ್ತೇವೆ ಎಂದರು.
ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ತೆರವು ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಅವರ ಹತ್ತಿರ ಮಾತನಾಡಿ ಎಂದರು.
ಪಾರ್ಲಿಮೆಂಟ್ ಅಫೆರ್ಸ್, ಸ್ಪೀಕರ್ ಅವರ ಸ್ವತ್ತು ಅದು. ಕಲಾಪದಲ್ಲಿ ಬಿಜೆಪಿ ನಾಯಕರ ಮಧ್ಯೆ ಒಮ್ಮತ ಮೂಡದ ವಿಚಾರಕ್ಕೆ ಉತ್ತರಿಸಿ, ಅವರ ಪಕ್ಷದ ವಿಚಾರ ಅವರಿಗೆ ನಮಗೆ ಬೇಡ ಎಂದರು.










