ಕಾರ್ಖಾನೆ ಬಾಯ್ಲರ್ ಸ್ಫೋಟ ಮಹಿಳೆ ಸಾವು ಹಲವರಿಗೆ ಗಾಯ

Listen News

ಅಥಣಿ : ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯ ಎಕ್ಸ್ ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬೈಲರ್ ಸ್ಪೋಟ್ ಗೊಂಡ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

Your Image Ad

ಬೆಳಿಗ್ಗೆ 10 ಕಾಲು ಗಂಟೆಗೆ ದುರ್ಘಟನೆ ಸಂಭವಿಸಿದ್ದು ಬೈಲರ್ ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ಒಡೆದಿದೆ 

Your Image Ad

ಕೆಲಸ ಮಾಡುತ್ತಿದ್ದ ಮೂವರು ಮಹಿಳೆರ ಪೈಕಿ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದ್ದಪ್ಪ ತೇಲಿ ಸಾವನ್ನಪ್ಪಿದ್ದಾಳೆ ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಖರಣ ದಾಖಲಾಗಿದೆ.

ವರದಿ :  ರಾಹುಲ್  ಮಾದರ

Read More Articles