ಅಧಿವೇಶನಕ್ಕೆ ತಟ್ಟಲಿದೆ ರೈತರ ಬಿಸಿ

ಬೆಳಗಾವಿ : ಕರ್ನಾಟಕದಲ್ಲಿ ಕೃಷಿ ಮಸೂದೆ ಕಾಯ್ದೆ ಜಾರಿಗೆ ತಂದಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಡಿ.4 ರಂದು ಇಲ್ಲಿನ ಚನ್ನಮ್ಮ ವೃತ್ತದಿಂದ ಪಾದಯಾತ್ರೆ ನಡೆಸುವುದರ ಮೂಲಕ ಸಾವಿರಾರು ರೈತರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

promotions

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಿ.4 ರಿಂದ ಸರಕಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಲಿದೆ. ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ನಮ್ಮ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿ ಈಗ ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಸಿದರು.

promotions

ಸಚಿವ ಶಿವಾನಂದ ಪಾಟೀಲ ಅವರು ಕೃಷಿ ಮಸೂದೆ ಕಾಯ್ದೆಯ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡುವುದಾಗಿ ಹೇಳಿದ್ದರು. ಇದನ್ನು ನೋಡಿದರೆ ಬಿಜೆಪಿ ಸರಕಾರ ಜಾರಿಗೆ ತಂದ ಕೃಷಿ ಮಸೂದೆ ಕಾಯ್ದೆಯನ್ನು ಅಂಗೀಕಾರಗೊಳಿಸಲು ಕಾಂಗ್ರೆಸ್ ಸರಕಾರ ಸಹಕಾರ ಮಾಡುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ ಎಂದರು.

ಸಿಎಂಬಸಿದ್ದರಾಮಯ್ಯನವರು ಕೃಷಿಯಲ್ಲಿ ಹೆಚ್ಚಿನ ತೆರಿಗೆ ಸಂಗ್ರಹವಾಗುತ್ತಿದೆ ಎಂದುಕೊಂಡು ಈ ಕಾಯ್ದೆಯನ್ನು ಹಿಂಪಡೆಯಲು ಸಾಧ್ಯವಾಗುತ್ತಿಲ್ಲವೆ ಎಂದು ಪ್ರಶ್ನಿಸಿದರು.

ರಾಜ್ಯ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಹೈನುಗಾರಿಕೆಯ ಹಾಲಿನ ಉತ್ಪಾನದಲ್ಲಿ 2 ರೂ. ಪ್ರೋತ್ಸಾಹ ಧನ ಘೋಷಣೆ ಮಾಡಿ, ಜಾನುವಾರುಗಳ ಹಿಂಡಿ ಖರೀದಿಯಲ್ಲಿ ನಾಲ್ಕು ರೂ. ಹೆಚ್ಚಳ ಮಾಡಿದ್ದಾರೆ. ರೈತರು ಬದುಕಬೇಕೋ ಬೇಡವೋ ಒಂದು ಕಡೆ ಕೊಟ್ಟು ಇನ್ನೊಂದು ಕಡೆ ಕಿತ್ತುಕೊಳ್ಳುವ ಪರಿಸ್ಥಿತಿ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಆಪಾದಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಸರಕಾರದ ಸಚಿವರು ಪಂಚರಾಜ ಚುನಾವಣೆಯಲ್ಲಿ ಕಾಲಹರಣ ಮಾಡುತ್ತಿದ್ದಾರೆ. ನಿಮ್ಮ ಪಕ್ಷವನ್ನು ಗೆಲ್ಲಿಸಲು ಬೇರೆ ರಾಜ್ಯಕ್ಕೆ ಹೋಗಿ ದುಂದು ವೆಚ್ಚ ಮಾಡಿದೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಸರಕಾರ ಕರ್ನಾಟಕದಲ್ಲಿ ರೈತರಿಗೆ ಯಾವ ಯೋಜನೆ ತಂದಿದೆ. ರೈತರ ಪಂಪಸೈಟ್ ಗಳನ್ನು ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಅಳವಡಿಸಿಕೊಳ್ಳಬೇಕು ಎಂದು ಹೇಳಿರುವುದು ದೊಡ್ಡ ಸಾಧನೆನಾ ಎಂದು ಪ್ರಶ್ನಿಸಿದರು.

Read More Articles