ತೋಟಗಾರಿಕೆ ಪಿತಾಮಹ ಡಾ.ಎಂ.ಮರೀಗೌಡ ಪುತ್ಥಳಿ ಅನಾವರಣ

ಮೈಸೂರು : ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

promotions

ಅವರು ಇಂದು ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

promotions

ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು

Read More Articles