ಶಾಂತಿಯುತ ಶಿಸ್ತಿನಿಂದ ಪರೀಕ್ಷೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ : ಮೋರಟಗಿ

ಅಥಣಿ :

promotions

ಎಸ್. ಎಸ್. ಎಲ್. ಸಿ. ಪರೀಕ್ಷೆ ಅಂಗವಾಗಿ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಾರ್ಯಾಲಯದ ಆವರಣದಲ್ಲಿ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಅಧ್ಯಕ್ಷತೆ ಯಲ್ಲಿ ಇಂದು ಪತ್ರಿಕಾ ಗೋಷ್ಠಿ ನಡೆಸಲಾಯಿತು.

promotions

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಬಿ. ಮೋರಟಗಿ ಮಾತನಾಡಿ ಅಥಣಿ 25/03/2024ರಿಂದ 06/04/24ರ ವರೆಗೆ ನಡೆಯಲಿರುವ ಎಸ್.ಎಲ್.ಸಿ.ಪರೀಕ್ಷೆಯು ತಾಲೂಕಿನಲ್ಲಿ ಒಟ್ಟು 7047 ಮಕ್ಕಳು ಪರೀಕ್ಷೆಗೆ ಹಾಜರ ರಾಗುತ್ತಾರೆ . ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 94 ಶಾಲೆಗಳಿದ್ದು. ಒಟ್ಟು 21 ಕೇಂದ್ರ ಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಸಿ. ಸಿ. ಟಿವಿ ಅಳವಡಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿಗಳನ್ನೊಳಗೊಂದಂತೆ ಪರೀಕ್ಷೆಗಳನ್ನು ಸುಗಮ, ಶಾಂತಿಯುತ ಹಾಗೂ ಯಾವುದೇ ಅಹಿತಕರ ಘಟನೆ ಜರುಗದಂತೆ ಶಿಸ್ತಿನಿಂದ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎಂದರು

ವರದಿ : ರಾಹುಲ್   ಮಾದರ

Read More Articles