3064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ ಸರ್ಕಾರ: ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶ

3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಹಾಗು ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶವಿದೆ.

promotions

ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ☎️ ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.

promotions

ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ &ಡಿಎಆರ್) (ಸಾಮಾನ್ಯ ಪುರುಷ & ಪುರುಷ ತೃತೀಯ ಲಿಂಗ) ಖಾಲಿ ಹುದ್ದೆಗಳ ವಿವರ:

ವೃಂದ: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಾಮಾನ್ಯ ಪುರುಷ) (ಸಿಎಆರ್ / ಡಿಎಆರ್):    2996


ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ತೃತೀಯ ಲಿಂಗ) (ಸಿಎಆರ್ / ಡಿಎಆರ್):    68

                           ಒಟ್ಟು 3064

ಅರ್ಹತಾ ಷರತ್ತುಗಳು : a)ಭಾರತೀಯ ನಾಗರಿಕನಾಗಿರತಕ್ಕದ್ದು.
B)ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
c) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
d) ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಸೂಚನೆಯನ್ವಯ ಕೇಂದ್ರ ಸರ್ಕಾರವು ಹೊರಡಿಸಿರುವ ತೃತೀಯ ಲಿಂಗ ವ್ಯಕ್ತಿಗಳ (ರಕ್ಷಣಾ ಹಕ್ಕುಗಳು) ನಿಯಮಗಳು, 2020 ರನ್ವಯ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಪಡೆಯತಕ್ಕದ್ದು. ಸದರಿ ಪ್ರಮಾಣ ಪತ್ರ ಹೊಂದಿರದಿದ್ದಲ್ಲಿ ತೃತೀಯ ಲಿಂಗದ ಮೀಸಲಾತಿಗೆ ಪರಿಗಣಿಸಲಾಗುವುದಿಲ್ಲ.

ವಯೋಮಿತಿ a) ಸಾಮಾನ್ಯ್ , ಅಭ್ಯರ್ಥಿಗಳಿ
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 31.10.2022ಕ್ಕೆ ಪುರುಷ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ii) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
iii) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

ಬುಡಕಟ್ಟು ಜನಾಂಗ ಎಂದರೆ ಉತ್ತರ ಕನ್ನಡ ಕಾರವಾರ, ದಕ್ಷಿಣ ಕನ್ನಡ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಅರಣ್ಯಗಳಲ್ಲಿ ಸಿದ್ದಿಗರು, ಜೇನುಕುರುಬ, ಕಾಡುಕುರುಬ, ಯೆರವ, ಸೋಲಿಗ, ಕುಡಿಯ, ಗೌಡ್ಲು, ಹಸಲರು, ಮಲೈಕುಡಿಯ ಮತ್ತು ಕೊರಗ ಬುಡಕಟ್ಟು ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು.

b) ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಮಾಜಿ ಸೈನಿಕ ಅಭ್ಯರ್ಥಿಯು ಸ್ವಸ್ಥ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ “ಅವರು ಸೇವೆ ಸಲ್ಲಿಸಿದ ಅವಧಿ” ಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು. ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.

c) ಮಾಜಿ ಸೈನಿಕರ ಬಗ್ಗೆ ವಿವರಣೆ: ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ. ಆದರೆ ಡಿಫೆನ್ಸ್ ಸೆಕ್ಯುರಿಟಿ ಕೋರ್ (Defence Security Corps),ಜನರಲ್ ರಿಸರ್ವ್ ಇಂಜಿನಿಯರಿಂಗ್‌ ಫೋರ್ಸ್ (General Reserved Engineering Force),ಲೋಕ್ ಸಹಾಯಕ್ ಸೇನಾ (Lok Sahayak Sena) ಮತ್ತು ಪ್ಯಾರಾ ಮಿಲಿಟರಿ ದಳ (Para Military Forces) ದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ:

i) ಅಂತಹ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ
ಅಥವಾ
ii) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಅಂತಹ ಸೇವೆಯಲ್ಲಿ ಬಿಡುಗಡೆಯಾದವನು.
ಅಥವಾ
iii) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇವೆಯಿಂದ ಬಿಡುಗಡೆ ಹೊಂದಿದ ವ್ಯಕ್ತಿ.
ಅಥವಾ
iv) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ, ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆ ಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು
ಅ) ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.
ಆ) ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.
ಇ) ಗ್ಯಾಲಂಟಿ ಪ್ರಶಸ್ತಿ ವಿಜೇತರು.

ಕೇಂದ್ರ ಸಶಸ್ತ್ರದಳದ ಸೇವೆಯಲ್ಲಿ ವ್ಯಕ್ತಿಗಳು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಮಾಜಿ ಸೈನಿಕರ ವರ್ಗದಡಿ ಬರುವ ವ್ಯಕ್ತಿಗೆ ಒಪ್ಪಂದವು ಪೂರ್ಣವಾಗಲು ಒಂದು ವರ್ಷಕ್ಕೆ ಮುನ್ನ ಉದ್ಯೋಗಕ್ಕೆ ಅರ್ಜಿ ಹಾಕಿಕೊಳ್ಳಲು ಹಾಗೂ ಅವರಿಗೆ ಮಾಜಿ ಸೈನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅನುಮತಿ ನೀಡಲಾಗಿದೆ. ಆದರೆ ಸಮವಸ್ತ್ರವನ್ನು ತ್ಯಜಿಸಲು ಅನುಮತಿ ನೀಡುವವರೆಗೆ ರಾಜ್ಯ ನಾಗರಿಕ ಸೇವೆ ಅಥವಾ ಹುದ್ದೆಗಳಿಗೆ ನೇಮಕ ಹೊಂದುವಂತಿಲ್ಲ.

BSF, CRPF, CISF ಪಡೆಗಳಿಂದ ನಿವೃತ್ತರಾದವರನ್ನು “ಮಾಜಿ ಸೈನಿಕ” ಎಂದು ಪರಿಗಣಿಸಲಾಗುವುದಿಲ್ಲ.

d) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸರಸ್ಯದಳದಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಡ್ಯತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು.

1. ಮೇಲಿನ ಷರತ್ತಿನ ಪ್ರಕಾರ ಮಾಜಿ ಸೈನಿಕ ಮೀಸಲಾತಿ ಕೋರುವ ಅಭ್ಯರ್ಥಿಗಳು ನಿಯಮಾನುಸಾರ ಆ ಮೀಸಲಾತಿಗೆ ಅರ್ಹರೇ? ಎಂಬುದನ್ನು ಹತ್ತಿರದ ಜಿಲ್ಲಾ ಸೈನಿಕ ಬೋರ್ಡ್‌ನಿಂದ ಮೀಸಲಾತಿಯನ್ನು ಕೋರುವುದು ಸೂಕ್ತ.

2. ಸರ್ಕಾರದ ಪತ್ರ ಸಂಖ್ಯೆ: ಒಇ 207 ಪೊಸಿಇ 2018, ದಿನಾಂಕ:05.02.2019 ರಲ್ಲಿ ಮಾಜಿ ಸೈನಿಕ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವ ಸಂಬಂಧ ಸ್ಪಷ್ಟಿಕರಣ ನೀಡಿದ್ದು, ಅದರಂತೆ ಅರ್ಹ ಮೆರಿಟ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಶೂನ್ಯ ಹಾಗೂ ಶೂನ್ಯಕ್ಕಿಂತ ಕಡಿಮೆ ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದು ಸೂಕ್ತವಲ್ಲ ಮತ್ತು ಸಮಂಜಸವಾಗಿರುವುದಿಲ್ಲವೆಂದು ಸ್ಪಷ್ಟಿಕರಣ ನೀಡಲಾಗಿರುವುದರಿಂದ ಶೂನ್ಯ ಹಾಗೂ ಶೂನ್ಯಕ್ಕಿಂತ ಕಡಿಮೆ ಅಂಕಗಳನ್ನು ಪಡೆದಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸದೆ ಆಯಾ ವರ್ಗಕ್ಕೆ ಸೇರಿದ ಇತರೇ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

Read More Articles