ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಮತದಾನ
- shivaraj bandigi
- 7 May 2024 , 7:10 PM
- Belagavi
- 701
ಬೈಲಹೊಂಗಲ : ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ಡಾ. ವಿಶ್ವನಾಥ ಪಾಟೀಲ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ನಂತರ ಮಾತನಾಡಿದ ಅವರು, ರಾಜ್ಯದ 28 ಲೋಕಸಭೆಯ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದು, ಕಾಂಗ್ರೆಸ್ ಮುಖಭಂಗ ಅನುಭವಿಸಲಿದೆ ಎಂದರು.

ಗ್ಯಾರಂಟಿ ಯೋಜನೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಕೊಟ್ಟ ಭರವಸೆಯನ್ನು ಕೂಡಾ ಈಡೇರಿಸಲು ಸಾಧ್ಯವಾಗಿಲ್ಲ. ಹುಸಿ ಭರವಸೆಯೊಂದಿಗೆ ಲೋಕಸಭೆ ಚುನಾವಣೆ ಎದಿರುಸುತ್ತಿದೆ ಎಂದರು.
ವರದಿ : ರವಿಕಿರಣ್ ಯಾತಗೇರಿ










