
ಟೆಕ್ಕಿ ಕುಟುಂಬದ ನಾಲ್ವರು ಶವವಾಗಿ ಪತ್ತೆ
ಬೆಂಗಳೂರು:ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಾಡಿಗೆ ಮನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಶವವಾಗಿ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದಾರೆ. ಬೆಂಗಳೂರು ಪೊಲೀಸರ ಪ್ರಕಾರ, ಮೃತರನ್ನು ಅನುಪ್ ಕುಮಾರ್ (38),ಅವರ ಪತ್ನಿ ರಾಖಿ (35),ಅವರ ಐದು ವರ್ಷದ ಮಗಳು ಮತ್ತು ಎರಡು ವರ್ಷದ ಮಗ ಎಂದು ಗುರುತಿಸಲಾಗಿದೆ.

ಕುಮಾರ್ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ವೇರ್ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದು, ಅವರು ಉತ್ತರ ಪ್ರದೇಶದ ಅಲಹಾಬಾದ್‌ನವರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯುತ್ತಿದ್ದೇವೆ" ಎಂದು ಪೊಲೀಸರು ತಿಳಿಸಿದ್ದಾರೆ.