ಮೃಣಾಲ್ ಹೆಬ್ಬಾಳ್ಕರಗೆ ಹೆಚ್ಚಿನ ಮತಗಳನ್ನು ನೀಡಿ: ಸಚಿವ ಸತೀಶ್ ಜಾರಕಿಹೊಳಿ
- shivaraj bandigi
- 27 Apr 2024 , 9:35 AM
- Belagavi
- 396
ಗೋಕಾಕ: ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಲೋಕಸಭೆ ಚುನಾವಣಾ ಪ್ರಚಾರಾರ್ಥವಾಗಿ ಬೆಳಗಾವಿ ಲೋಕಸಭೆ ಕ್ಷೇತ್ರದ ಗೋಕಾಕ ನಗರದ ವಿವಿಧೆಡೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಅವರ ಭಾಷಣದಿಂದ ದೇಶ ಅಭಿವೃದ್ಧಿ ಆಗಲ್ಲ. ಅಧಿಕಾರಕ್ಕೆ ಬಂದರೆ ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ ಮೋದಿ ಯುವಕರಿಗೆ ಉದ್ಯೋಗ ನೀಡಿಲ್ಲ. ಆದ್ದರಿಂದ ಮೇ. 7 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಎಲ್ಲರೂ ಸಮಾನತೆಯೆಯಿಂದ ಬಾಳಬೇಕು ಎನ್ನುವುದು ಸಿಎಂ ಸಿದ್ದರಾಮಯ್ಯನವರ ಆಶಯ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದ ಹಿತ ಕಾಪಾಡುತ್ತಿರುವ ಅಪರೂಪ ನಾಯಕ ಸಿದ್ದರಾಮಯ್ಯ ಅವರು, ಅವರ ಶಕ್ತಿಯನ್ನು ನಾವು ಬಲಪಡಿಸಬೇಕು. ಅವರ ಶಕ್ತಿ ದೇಶದ ಜನತೆಗೆ ತಿಳಿಯಬೇಕೆಂದರೆ ಅತೀ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಎಲ್ಲಾ ಸಮುದಾಯದ ಹಿತ ಬಯಸುವ ಸಿಎಂ ಸಿದ್ದರಾಮಯ್ಯನರು ಗ್ಯಾರಂಟಿ ಯೋಜನೆ ಜಾರಿಗೆ ತಂದು ಯಶಸ್ಸು ಕಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಶೋಕ ಪೂಜಾರಿ, ಡಾ. ಮಹಾಂತೇಶ ಕಡಾಡಿ, ಚಂದ್ರಶೇಖರ ಕೊಣ್ಣೂರು, ಸಿದ್ದಲಿಂಗ್ ದಳವಾಯಿ ಸೇರಿದಂತೆ ಮುಸ್ಲಿಂ, ಕುರುಬ ಸಮಾಜದ ನೂರಾರು ಮುಖಂಡರು ಇದ್ದರು.










