ಗಡಿ ವಿಷಯದಲ್ಲಿ ಸರಕಾರದ ದಿವ್ಯ ನಿರ್ಲಕ್ಷ್ಯ: ಚಂದರಗಿ

ಬೆಳಗಾವಿ:  ಕರ್ನಾಟಕದ ನಾಲ್ಕು ಜಿಲ್ಲೆಗಳು ಮಹಾರಾಷ್ಟ್ರ ಜಿಲ್ಲೆಗೆ ಸೇರಬೇಕು ಎಂದು ಹೂಡಿದ ದಾವೆ ನ.29 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ.

promotions
ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು‌, ಸರಕಾರ ಗಡಿವಿಷಯದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ. ನೆಲ,ಜಲ ವಿಷಯದಲ್ಲಿ ಜನರಿಗೆ ತಿಳಿದುಕೊಳ್ಳುವ ಅಗತ್ಯ ಇದೆ‌. ಆದರೆ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

promotions

ಸರಕಾರ ಈ ಕುರಿತು ಗಂಭೀರ ಚಿಂತನೆ ನಡೆಸಬೇಕಿದೆ. ಈಗಾಗಲೇ ಮಹಾರಾಷ್ಟ್ರವರು ಸಾಕಷ್ಟು ಮುಂದೆ ಹೋಗಿದ್ದಾರೆ. ನಮ್ಮ‌ ಸರಕಾರಕ್ಕೆ ಇಚ್ಚಾಶಕ್ತಿ ಇಲ್ಲ ಎಂದು ಸರಕಾರದ ವಿರುದ್ಧ ಹರಿಹಾಯ್ದರು.

Read More Articles