ಗೃಹಲಕ್ಷ್ಮೀ ಯೋಜನೆ ಮಹಿಳಾ ಸಬಲೀಕರಣದ ಹೆಗ್ಗುರುತು ಹೆಬ್ಬಾಳ್ಕರ್

ಬೆಂಗಳೂರು :ಕರ್ನಾಟಕ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕುರಿತು ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2,000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ ಎಂದು ಹೇಳಿದ್ದಾರೆ.

promotions

ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗು ಕುಟುಂಬದ ಅಭಿವೃದ್ಧಿ ಮತ್ತು ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ.

promotions

ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತಿದೆ ಎಂದು ಶಾಸಕಿ ಹೆಬ್ಬಾಳ್ಕರ್ ಹೇಳಿದ್ದಾರೆ.

Read More Articles