ಶೆಟ್ಟರ್ ಬಿಜೆಪಿಗೆ ಬಂದಿರುವುದು ಖುಷಿಯಾಗಿದೆ: ಶೃದ್ಧಾ

ಬೆಳಗಾವಿ :

promotions

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಿರೋದು ತುಂಬಾ ಖುಷಿಯಾಗಿದೆ ಎಂದು ಶ್ರದ್ಧಾ ಶೆಟ್ಟರ್ ಹೇಳಿದರು.

promotions

ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರಿರುವುದು ನಮ್ಮ ಕುಟುಂಬಕ್ಕೆ ಅಷ್ಟೆಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಗೆ ಖುಷಿ ತಂದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ದಿನ ಸಂತೋಷದ ಸಂದರ್ಭ ಎಂದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬರುವ ಚುನಾವಣನೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ನಾನು ಇನ್ನೂ ಚರ್ಚೆ ಮಾಡಿಲ್ಲ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ. ನಮ್ಮ ಕುಟುಂಬಕ್ಕೆ ಸಿಕ್ಕರೂ ಕೆಲಸ ಮಾಡುತ್ತೇವೆ. ಹೈಕಮಾಂಡ್ ಎನೂ ನಿರ್ಧಾರ ತೆಗೆದುಕೊಳ್ಳುತ್ತೆ ಅದಕ್ಕೆ ನಾನು ಬದ್ದ ಎಂದರು.

Read More Articles