ಮಾನವ ಸರಪಳಿ ನಿರ್ಮಿಸಿ ರೈತರ ಬೃಹತ್ ಪ್ರತಿಭಟನೆ

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಬೆಲೆ ನಿಗದಿಯಾಗುವವರೆಗೂ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಗರದ ಚನ್ನಮ್ಮ‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ‌ ನಡೆಸಿದರು.

promotions

ರೈತರು ಬೆಳೆದ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾದ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿಯುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಒಟ್ಟು 27 ಸಕ್ಕರೆ ಕಾರ್ಖಾನೆಗಳು ಇವೆ. ಆದರೆ ಸಕ್ಕರೆ ಆಯುಕ್ತರಿಗೆ ಮಾಹಿತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

promotions

ಕಳೆದ ವರ್ಷದ ಎಂ.ಕೆ. ಹುಬ್ಬಳ್ಳಿಯ ಸಕ್ಕರೆ ಕಾರ್ಖಾನೆಯ ಕಬ್ಬಿನ ಬಾಕಿ ಬಿಲ್ ಸುಮಾರು 3 ಕೋಟಿ. ರೂ. ಬಾಕಿ ಇದೆ. ಅದನ್ನು ಕೊಡಿಸಬೇಕು. ಕಳೆದ ಬಾರಿಯೂ ಎಫ್‌ಆರ್‌ಪಿ ದರ ನಿಗದಿ ಪಡಿಸಿದಂತೆಯೇ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 55 ರಿಂದ 60 ಕೋಟಿ ರೂ. ಕಬ್ಬಿನ ಬಾಕಿ ಬಿಲ್ ಕೊಡಬೇಕಿದೆ ಅದನ್ನು ಶೀಘ್ರದಲ್ಲೇ ಕೊಡಿಸಬೇಕಂದು ಒತ್ತಾಯಿಸಿದರು.

Read More Articles