ಜೋಶಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ: ಹುಕ್ಕೇರಿ ಶ್ರೀಗಳ ಸಂತಸ
- 17 Dec 2023 , 9:43 PM
- Belagavi
- 148
ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ ಅವರಿಗೆ ಸರಕಾರ ಸಚಿವ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರಿಗೆ ಒಂದು ಮಾತೃ ಸಂಸ್ಥೆ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡವನ್ನು, ಕನ್ನಡ, ಕನ್ನಡ ಸಾಹಿತ್ಯದ ಬಗ್ಗೆ ನಿರಂತರವಾಗಿ ಶ್ರಮಿಸುವ ಕನ್ನಡ ಸಾಹಿತ್ಯ ಪರಿಷತ್ತಿಗೆ ರಾಜ್ಯ ಸರಕಾರ ಸಚಿವ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿರುವುದು ಇಡೀ ಕನ್ನಡಿಗರನ್ನೇ ಗೌರವಿಸಿದಂತಾಗಿದೆ.

ಈ ಸಂದರ್ಭದಲ್ಲಿ ಸರಕಾರವನ್ನು ಅಭಿನಂಧಿಸುತ್ತೇವೆ ಎಂದು ಹುಕ್ಕೇರಿ ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










