ಹಸಿವು ಮುಕ್ತ ಕರ್ನಾಟಕ ಸರ್ಕಾರದ ಮುಖ್ಯ ಧ್ಯೆಯ ! ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ :  ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಯೋಜನೆ ನೀಡಿದೆ. ಗಾಂಧಿಜಿ ನೇತೃತ್ವದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶ ನಡೆದಿದ್ದು ಇತಿಹಾಸವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

promotions

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ 78ನೇ ಸ್ವಾತಂತ್ರ್ಯೋತ್ವದ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು.

promotions

ಶಕ್ತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ನಿತ್ಯ 5.40 ಲಕ್ಷ ಜನ ಪ್ರಯಾಣ ಮಾಡುತ್ತಿದ್ದಾರೆ. ಹಸಿವು ಮುಕ್ತ ಕರ್ನಾಟಕ ನಮ್ಮ ಸರ್ಕಾರದ ಮುಖ್ಯ ಧ್ಯೆಯವಾಗಿದೆ. ಅನ್ನಭಾಗ್ಯ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.

ಬೆಳಗಾವಿಯಲ್ಲಿ 9,93,547 ಜನ ಗೃಹ ಜ್ಯೋತಿಯ ಲಾಭ ಪಡೆಯುತ್ತಿದ್ದಾರೆ. 11,87,569 ಜನ ಗೃಹ ಲಕ್ಷ್ಮೀ ಯೋಜನೆಯನ್ನು ಮನೆಯ ಯಜಮಾನಿ 2,000 ಪಡೆಯುತ್ತಿದ್ದಾರೆ. ಯುವ ನಿಧಿ ಯೋಜನೆಯಲ್ಲಿ 11,365 ಯುವಕರು ಅರ್ಜಿ ನೊಂದಾಯಿಸಿದ್ದಾರೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗಿದೆ ಪ್ರವಾಹ ಪೀಡಿತ 5 ತಾಲೂಕುಗಳಲ್ಲಿ 30 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದರು

ಈ ಸಂದರ್ಭದಲ್ಲಿ ಮೇಯರ್ ಸವಿತಾ ಕಾಂಬಳೆ, ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More Articles