ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಲೇ ಇರುತ್ತೇನೆ : ರಾಹುಲ ಗಾಂಧಿ

ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು ನನ್ನ ಕೆಲಸ, ಅಂದರೆ ದೇಶದ ಸಂಸ್ಥೆಗಳನ್ನು ರಕ್ಷಿಸುವುದು, ದೇಶದ ಬಡ ಜನರ ಧ್ವನಿಯನ್ನು ರಕ್ಷಿಸುವುದು ಮತ್ತು ಪ್ರಧಾನ ಮಂತ್ರಿಯೊಂದಿಗಿನ ಸಂಬಂಧವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅದಾನಿಯಂತಹ ಜನರ ಬಗ್ಗೆ ಜನರಿಗೆ ಸತ್ಯವನ್ನು ಹೇಳುವುದು ನನ್ನ ಕೆಲಸ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

promotions

ಅವರು ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಕೆಲಸವನ್ನು ಮಾಡುತ್ತೇನೆ.  ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ.  ದೇಶಕ್ಕಾಗಿ ಹೋರಾಡುತ್ತಲೇ ಇರುತ್ತೇನೆ ಎಂದು ಹೇಳಿದ್ದಾರೆ.

promotions

ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಹೆದರಿದ್ದು, ಅವರ ಕಣ್ಣಲ್ಲಿ ಅದನ್ನು ಕಂಡಿದ್ದೇನೆ.  ಅದಕ್ಕಾಗಿಯೇ, ಮೊದಲು ಗೊಂದಲ ಮತ್ತು ನಂತರ ಅನರ್ಹತೆ ಮಾಡಿದ್ದಾರೆ ಎಂದು ಹೇಳಿದ್ದರೆ.

ಅದಾನಿ ಶೆಲ್ ಕಂಪನಿಗಳಿಗೆ 20,000 ಕೋಟಿ ರುಪಾಯಿ ಯಾರದ್ದು ಎಂಬ ಸರಳ ಪ್ರಶ್ನೆಯಿಂದ ಪ್ರಧಾನಿಯನ್ನು ರಕ್ಷಿಸಲು ನಡೆಸಲಾದ ಸಂಪೂರ್ಣ ನಾಟಕ ಇದು.  ಈ ಬೆದರಿಕೆ, ಅನರ್ಹತೆ ಅಥವಾ ಜೈಲು ಶಿಕ್ಷೆಗೆ ನಾನು ಹೆದರುವುದಿಲ್ಲ

ನಾನು ಪ್ರಶ್ನೆಗಳನ್ನು ಕೇಳುತ್ತೇನೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಾಡಿದ ನನ್ನ ಭಾಷಣವನ್ನು ಹೊರಹಾಕಲಾಯಿತು ಮತ್ತು ನಂತರ ನಾನು ಲೋಕಸಭೆ ಸ್ಪೀಕರ್‌ಗೆ ವಿವರವಾದ ಉತ್ತರವನ್ನು ಬರೆದೆ.  ಕೆಲವು ಮಂತ್ರಿಗಳು ನನ್ನ ಬಗ್ಗೆ ಸುಳ್ಳು ಹೇಳಿದರು, ನಾನು ವಿದೇಶಿ ಶಕ್ತಿಗಳ ಸಹಾಯ ಕೇಳಿದೆ,ಆದರೆ ನಾನು ಅಂತಹ ಯಾವುದೇ ಕೆಲಸ ಮಾಡಿಲ್ಲ.  ನಾನು ಪ್ರಶ್ನೆ ಕೇಳುವುದನ್ನು ನಿಲ್ಲಿಸುವುದಿಲ್ಲ, ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಲೇ ಇರುತ್ತೇನೆ

ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಈ ಹಿಂದೆಯೂ ಹಲವು ಬಾರಿ ಹೇಳಿದ್ದೆ.  ಇಂತಹ ಉದಾಹರಣೆಗಳನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ.  ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದೆ ಎಂದು ಹೇಳಿದ್ದಾರೆ.

Read More Articles