ಯುವನಿಧಿ ಗ್ಯಾರಂಟೀ ಜಾರಿ : ಯಾರಿಗುಂಟು ಯಾರಿಗಿಲ್ಲ ಈ ಗ್ಯಾರಂಟೀ ಈ ಸುದ್ದಿ ಓದಿ
- Krishna Shinde
- 15 Jan 2024 , 1:28 AM
- Bengaluru
- 303
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡುವ "ಯುವನಿಧಿ" ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಷರತ್ತು ಮತ್ತು ನಿಬಂಧನೆಗಳು:

ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ವಗತಗೊಳಿಸಲಾಗುವುದು.
ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯೋಜನೆಗೆ ಅರ್ಹರಾಗದೇ ಇರುವವರು:
ಉನ್ನತ ವ್ಯಾಸಂಗಕ್ಕೆ, ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು
ತಿನ್ನು (Apprentice) ವೇತನವನ್ನು ಪಡೆಯುತ್ತಿರುವವರು
ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.










