ಐಪಿಎಲ್ :ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ನ ಮೆಂಟರ್ ಗೌತಮ್ ಗಂಭೀರ್ ಸೋಮವಾರ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಪಂದ್ಯದ ನಂತರ ನಡೆದ ಜಗಳಕ್ಕಾಗಿ ಪಂದ್ಯದ ಶುಲ್ಕದ 100% ದಂಡವನ್ನು ವಿಧಿಸಿದ್ದಾರೆ ಹಾಗು LSG ಬೌಲರ್ ನವೀನ್-ಉಲ್-ಹಕ್ ಅವರ ಮೇಲೆ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗಿದೆ.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಗಂಭೀರ್ ಮತ್ತು ವಿರಾಟ್ ಕೊಹ್ಲಿ 2 ನೇ ಹಂತದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಹಾಗು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಶುಲ್ಕದ ಶೇಕಡಾ 100ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ತಿಳಿಸಿದೆ.