ಖೋ ಖೋ ಕ್ರೀಡೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು
- 13 Jan 2024 , 3:14 PM
- Belagavi
- 522
ಅಥಣಿ : ಅಥಣಿ ತಾಲೂಕಿನ ಶಂಕರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಖೋ ಖೋ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯ ಅಮರಸಿಂಗ ಪಾಟೀಲ, ಅಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.
