ಗಂಗಾವತಿ ನಗರದ ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಸಿದ ಜನಾರ್ಧನ ರೆಡ್ಡಿ

ಗಂಗಾವತಿ : ಪಟ್ಟಣದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಗಂಗಾವತಿ ನಗರದ ಅಭಿವೃದ್ಧಿ ಕುರಿತು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಸಭೆ ನಡೆಸಿದ್ದಾರೆ.

promotions

ಕಾಮಗಾರಿಗಳ ಬಗ್ಗೆ ಮಾಹಿತಿ  ಪಡೆದ ರೆಡ್ಡಿ ಗುಣಮಟ್ಟ ಮತ್ತು ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ನಗರದ ಅಭಿವೃದ್ಧಿಗೆ ಎಲ್ಲಾ ತರಹದ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

promotions

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು ಬಂದರೆ ಅಂತಹ ಅಧಿಕಾರಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ರೆಡ್ಡಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ವಿರೂಪಾಕ್ಷ ಮೂರ್ತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Read More Articles