ಕುಸ್ತಿಪಟುಗಳಿಗೆ ನ್ಯಾಯ ಕೊಡಿಸಿ, ಬಿಜೆಪಿ ಸಂಸದನ ಬಂಧನಕ್ಕೆ ಪ್ರತಿಭಟನೆ

ಬೆಳಗಾವಿ:ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮ, ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ಗುರುವಾರ ವಿವಿಧ ರೈತ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

promotions

ಒಲಂಪಿಕ್ ಪದಕ ವಿಜೇತರು, ವಿಶ್ವಚಾಂಪಿಯನ್ ಕುಸ್ತಿಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿಪಟುಗಳು ಕಳೆದ ಏ.24 ರಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಅವರಿಗೆ ಸರಿಯಾಗಿ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ ಎಂದು ಮನವಿಯಲ್ಲಿ ದೂರಿದ್ದಾರೆ.

promotions

ಪೊಲೀಸ್ ದೂರು ನೀಡಿದರೂ ಪ್ರಕರಣ ದಾಖಲಾಗಿರಲಿಲ್ಲ. ನ್ಯಾಯಾಲಯದ ಮಧ್ಯ ಪ್ರದೇಶದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಸ್ತಿಪಟುಗಳ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಿದಗೌಡ ಮೋದಗಿ, ಜಯಶ್ರೀ‌ ಗುರಣ್ಣವರ, ಸುಜೀತ ಮುಳಗುಂದ ಸೇರಿದಂತೆ ಇನ್ನಿತರರು ‌ಉಪಸ್ಥಿತರಿದ್ದರು.

Read More Articles