ಕಾರಜೋಳಗೆ ಕಾಂಗ್ರೆಸ್ ಇತಿಹಾಸ ಗೊತ್ತಿಲ್ಲ: ತಿಮ್ಮಾಪುರ
- 15 Jan 2024 , 1:14 AM
- Belagavi
- 119
ಬೆಳಗಾವಿ: ಗೋವಿಂದ್ ಕಾರಜೋಳ ಅವರಿಗೆ ಕಾಂಗ್ರೆಸ್ ಬಗ್ಗೆ ಇತಿಹಾಸ ಗೊತ್ತಿಲ್ಲ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.

ಗುರುವಾರ ಬೆಳಗಾವಿ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಜೋಡೋ ಪಾದಯಾತ್ರೆ ಐತಿಹಾಸಿಕವಾಗಿದೆ. ಬಿಜೆಪಿಯವರು ವಿನಾಕಾರಣk ಆರೋಪ ಮಾಡುವುದು ಸರಿಯಲ್ಲ. ಬೆಳಗಾವಿ ನಗರದ ಎರಡೂ ಕ್ಷೇತ್ರದಲ್ಲಿ ಸುಮಾರು 10 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

ಸದಾನಂದ ಡಂಗಣ್ಣವರ ಮಾತನಾಡಿ, ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಯಾತ್ರೆ ಸೆ.30ರಂದು ಕರ್ನಾಟಕ ಪ್ರವೇಶ ಮಾಡಲಿದೆ.ಬೆಳಗಾವಿ ನಗರದಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ನೀಡಲು ಸಭೆ ನಡೆಸಲಾಗಿದೆ ಎಂದರು. ಬೆಲೆ ಏರಿಕೆ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿರುವ ಕೇಂದ್ರ ಸರಕಾರದ ವೈಫಲ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ರಾಜು ಸೇಠ್, ಪರಶುರಾಮ ಒಗ್ಗಣ್ಣವರ, ಗಜುಧರನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










