ಕೆಎಎಸ್ ಪರೀಕ್ಷೆ: ಶಾಲಿನಿ ರಜಿನೀಶ್ ನೇತೃತ್ವದಲ್ಲಿ ಜನವರಿ 18ಕ್ಕೆ ಮಹತ್ವ ಸಭೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯಲ್ಲಿ ಕಂಡುಬಂದ ಯಡವಟ್ಟುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಜನವರಿ 18ರಂದು ಮಹತ್ವ ಸಭೆ ನಡೆಯಲಿದೆ.

promotions

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಈ ಸಭೆ ಆಯೋಜನೆಯಾಗಿದ್ದು, ಸಭೆಯಲ್ಲಿ ಸಭಾ ಲೋಪದೋಷಗಳು, ಪರೀಕ್ಷಾರ್ಥಿಗಳ ಸಮಸ್ಯೆಗಳು ಮತ್ತು ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಪ್ರಮುಖವಾಗಿ ಮರು ಪರೀಕ್ಷೆ ನಡೆಸಬೇಕೆ ಅಥವಾ ಪೂರ್ವಭಾವಿ ಪರೀಕ್ಷೆ ಬರೆದವರಿಗೆ ಮುಖ್ಯ ಪರೀಕ್ಷೆಗೆ ಅವಕಾಶ ನೀಡಬೇಕೆಂಬ ಬಗ್ಗೆ ನಿರ್ಣಯವಾಗುವ ಸಾಧ್ಯತೆ ಇದೆ.

promotions

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೆಪಿಎಸ್‌ಸಿ ಕಾರ್ಯದರ್ಶಿ ರಣದೀಪ್ ಚೌಧರಿ, ಡಿಪಿಎಆರ್ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. Read in English: KAS Exam: Key Meeting Led by Shalini Rajneesh on January 18

2024ರ ಆಗಸ್ಟ್ 27ರಂದು ನಡೆಸಿದ ಪೂರ್ವಭಾವಿ ಪರೀಕ್ಷೆಯಲ್ಲಿ ಲೋಪದೋಷಗಳು ವರದಿಯಾಗಿದ್ದು, ತೀವ್ರ ವಿವಾದಕ್ಕೆ ಗ್ರಾಸವಾಗಿತ್ತು. ಇದರ ಪೈಕಿ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲಾಗಿತ್ತು. ಈ ಮಧ್ಯೆ, ಸರ್ಕಾರದ ಕ್ರಮಗಳನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳು, ಸರ್ಕಾರ ಪರೀಕ್ಷಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಆರೋಪಿಸಿವೆ.

ಪರೀಕ್ಷಾರ್ಥಿಗಳ ಪ್ರತಿಭಟನೆಗಳನ್ನು ಮತ್ತು ಅವರ ಬೇಡಿಕೆಗಳನ್ನು ಪರಿಗಣಿಸಿಕೊಳ್ಳುವುದಾಗಿ ಸರ್ಕಾರ ಆಶ್ವಾಸನೆ ನೀಡಿದೆ. ಜನವರಿ 18ರ ಸಭೆ ಮಹತ್ವದ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆಯನ್ನು ತೋರಿಸುತ್ತದೆ.

Read More Articles