ಕಾವೇರಿ ಬಿಕ್ಕಟ್ಟು: ಯಾವುದೇ ಬಂದ್ ಗೆ ಬೆಂಬಲವಿಲ್ಲ ಕರವೇ ಸ್ಪಷ್ಟನೆ
- Krishna Shinde
- 15 Jan 2024 , 4:45 AM
- Bengaluru
- 285
ಬೆಂಗಳೂರು :ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 26-9-2023ರಂದು ಮತ್ತು 30-9-2023ರಂದು ಹಲವು ಸಂಘಟನೆಗಳು ಪ್ರತ್ಯೇಕವಾಗಿ ಕರೆ ನೀಡಿರುವ ಬಂದ್ ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇರುವುದಿಲ್ಲ ಎಂದು ತಿಳಿಸಿದೆ,ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ರಾಜ್ಯಾದ್ಯಂತ ಮುಂದುವರೆಯುತ್ತದೆ ಎಂದು ತಿಳಿಸಿದೆ.

ಇಂದು ಬೆಳಿಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿತು ಮತ್ತು ನಿರ್ಣಯಗಳು ಕೆಳಕಂಡಂತಿವೆ.

1. ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಾಳೆ ಮತ್ತು 30ರಂದು ಹಲವು ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಕರ್ನಾಟಕ ಬಂದ್ ಇತ್ಯಾದಿಗಳಿಗೆ ಕರ್ನಾಟಕ ಬೆಂಬಲಿಸುವುದಿಲ್ಲ ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ರಕ್ಷಣಾ ವೇದಿಕೆ ಪ್ರತಿದಿನವೂ ನಡೆಯಲಿದ್ದು, ನಾಳೆ 26-9-2023ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
2. ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ ಮತ್ತು ರಾಜ್ಯಾದ್ಯಂತ ಚಳವಳಿಯನ್ನು ಜನರ ನಡುವೆ ಬೆಳೆಸುತ್ತ ಹೋಗುತ್ತದೆ. ದಿಢೀರನೆ ಬಂದ್ ಗೆ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ವೇದಿಕೆ ಒಪ್ಪುವುದಿಲ್ಲ. ಬಂದ್ ಎಂಬುದು ಒಂದು ಚಳವಳಿಯ ಕೊನೆಯ ಅಸ್ತ್ರವಾಗಿರಬೇಕೇ ಹೊರತು ಅದೇ ಮೊದಲ ಅಸ್ತ್ರವಾಗಬಾರದು ಎಂದು ಹೇಳಿದೆ.
3. ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಕಾರ್ಯ ಮಾಡುವುದಿಲ್ಲ ಮತ್ತು ಬಂದ್ ಸಂಬಂಧಿಸಿದ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಆದರೆ ಕಾವೇರಿ ನೀರಿಗಾಗಿ ನಡೆಯುತ್ತಿರುವ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಹೇಳಿದ್ದಾರೆ.
ಸುಮಾರು ಏಳು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಸಿಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಚಳವಳಿಗಳು ಮುಂದುವರೆಯುತ್ತವೆ ಎಂದು ಹೇಳಿದೆ.










