ಕೊಪಣ ಮೀಡಿಯಾ ಫೆಸ್ಟ್-೨೦೧೪

ಕೊಪ್ಪಳಪ್ರಪ್ರಥಮ ಬಾರಿಗೆ ಕೊಪ್ಪಳ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುತ್ವ ಮೀಡಿಯಾ ಹೌಸ್ ಬಹುತ್ವ ಬಳಗ ಕೊಪ್ಪಳ ಇವರ ನೇತೃತ್ವದಲ್ಲಿ ಕೊಪಣ ಮೀಡಿಯಾ ಫೆಸ್ಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

promotions

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಪತ್ರಿಕಾ ದಿನಾಚರಣೆ, ಗೋಷ್ಠಿಗಳು ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ದಿನಾಂಕ 24ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದಲ್ಲಿ ಬೆಳಿಗ್ಗೆ ೧೧ ಗಂಟೆಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ದಿನಾಂಕ 25 ರಂದು ಬಾಲಾಜಿ ಫಂಕ್ಷನ್ ಭಾಗ್ಯನಗರ ರಸ್ತೆ ಕೊಪ್ಪಳದಲ್ಲಿ ವೇದಿಕೆ ಕಾರ್ಯಕ್ರಮಗಳು

promotions

 ನಡೆಯಲಿದ್ದು ಇದರಲ್ಲಿ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ, ಹಂಪಿಯ ಕನ್ನಡ ವಿಶ್ವವಿದ್ಯಾಲಯ ಸಮೂಹನ ಹಾಗೂ ಪತ್ರಿಕೋದ್ಯಮ ವಿಭಾಗ, ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಮೂರು ಜಿಲ್ಲೆಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿ ಸ್ ಸಹಕಾರ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಗಣ್ಯರು, ಹಾಗೂ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳು, ಪ್ರಾಧ್ಯಾಪಕರು, ಉಪನ್ಯಾಸಕರು, ಭಾಗವಹಿಸಲಿದ್ದಾರೆ.

ವರದಿ  : ರವಿಚಂದ್ರ  ಬಿ  ಬಡಿಗೇರ್ 

Read More Articles