ಕಾಂಗ್ರೇಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೊಲೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಕಾಂಗ್ರೇಸ್ ಸರ್ಕಾರದ ವಿರುದ್ಧ ಕಿಡಿಕರಿದ್ದಾರೆ. ನಿನ್ನೆ ಹುಬ್ಬಳ್ಳಿ ಮತ್ತು ಗದಗನಲ್ಲಿ ನಡೆದ ಭೀಕರ ಹತ್ಯೆಗಳು ನಡೆದಿವೆ, ಗದಗನಲ್ಲಿ ಮನೆ ನುಗ್ಗಿದ ಹಂತಕರು ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡುತ್ತಾರೆ ಮತ್ತು ಹುಬ್ಬಳ್ಳಿಯ ಕಾಲೇಜು ಅವರಣದಲ್ಲಿ ಕೊಲೆ ನಡೆಯುತ್ತದೆ ಅಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಿಗೆ ಕುಸಿದಿದೆ ಮತ್ತು ಆಡಳಿತ ಯಂತ್ರ ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

promotions

promotions

Read More Articles