ಜಿಲ್ಲೆಯ ಪ್ರಮುಖ ನದಿಗಳ ಮೇಲೆ ನಿಗಾವಹಿಸಲಾಗಿದೆ! ಡಿಸಿ ರೋಷಣ
- shivaraj B
- 24 Jul 2024 , 2:43 PM
- Belagavi
- 6239
ಬೆಳಗಾವಿ : ಪಶ್ಚಿಮ ಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳ ಸಭೆ ನಡೆಸಿದರು.

ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ಕೃಷ್ಣ, ಘಟಪ್ರಭಾ, ಮಲಪ್ರಭಾ ನದಿಗಳ ಮೇಲೆ ನಿಗಾ ವಹಿಸಲಾಗಿದ್ದು, ರಾಜಪುರದಿಂದ 1 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವದರಿಂದ ಹಿಪ್ಪರಗಿಯಿಂದ 1.5 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಘಟಪ್ರಭಾ ಜಲಾಶಯದಲ್ಲಿ ಪ್ರತಿದಿನ ಮೂರು ಟಿಎಂಸಿ ಅಷ್ಟು ನೀರು ಸಂಗ್ರಹವಾಗುತ್ತಿದೆ.
ಇಂದು ಸಂಜೆಯಿಂದ ಘಟಪ್ರಭಾ ನದಿಯಿಂದ ನೀರು ಬಿಡುಗಡೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಮಾಹಿತಿ ನೀಡಿದರು.
ಗೋಕಾಕ ತಾಲೂಕಿನ ಲೋಳಸೂರು ಬ್ರಿಡ್ಜ್ ಬಳಿ 35 ಸಾವಿರ ಕ್ಯೂಸೆಕ್ ನೀರು ಹರಿದು ಹೋಗಲಿದೆ. ಆಲಿಮಟ್ಟಿಯಿಂದ ಎರಡು ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾಹಿತಿ ಪಡೆಯಲಾಗಿದ್ದು, ಕೃಷ್ಣ ನದಿ ವ್ಯಾಪ್ತಿಯಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.
ಒಂದೆರಡು ಗ್ರಾಮಕ್ಕೆ ನೀರು ನುಗ್ಗುವ ಸಾಧ್ಯತೆ ಇರುವದರಿಂದ ಸಂಬಂಧಪಟ್ಟ ತಹಶಿಲ್ದಾರಗಳಿಗೆ ಸ್ಥಳಕ್ಕೆ ಹೋಗಲು ಸೂಚನೆ ನೀಡಲಾಗಿದೆ.
ಕಾಗವಾಡ ತಾಲೂಕಿನ ಎರಡು ಗ್ರಾಮಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ ಎಂದರು. ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಹುಕ್ಕೇರಿ, ಗೋಕಾಕ್, ಮೂಡಲಗಿ ತಾಲೂಕುಗಳ ಬರುತ್ತವೆ.
ಸಂಕೇಶ್ವರದಲ್ಲಿ ಪಟ್ಟಣದಲ್ಲಿಯೂ ಸಹ ನೀರು ಬರುವ ಬಗ್ಗೆ ಈಗಾಗಲೆ ಕ್ರಮ ವಹಿಸಲಾಗಿದೆ.
ಬಳ್ಳಾರಿ ನಾಲಾದಿಂದ ಕುಂದರಗಿ, ಪಾಶ್ಚಾಪುರ ಗ್ರಾಮದ ತೋಟಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ರೈತರಿಗೆ ಈಗಾಗಲೇ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದರು.
ಗೋಕಾಕ್ ನಗರದಲ್ಲಿ ಯಾವುದೇ ತೊಂದರೆ ಇಲ್ಲ. ಅಂಕಲಗಿ ಗ್ರಾಮದ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕುಂದರಗಿ ಅಡವಿ ಸಿದ್ದೇಶ್ವರ ಮಠದ ಎಲ್ಲರನ್ನೂ ಅಂಕಲಗಿಯ ಮತ್ತೊಂದು ಮಠಕ್ಕೆ ಸ್ಥಳಾಂತಿರಲಾಗಿದೆ ಎಂದರು. ಅದೇ ರೀತಿ ಮೂಡಲಗಿಯ ಹಲವು ಗ್ರಾಮಗಳಿಗೆ ಅಲರ್ಟ್ ಮಾಡಲಾಗಿದೆ.
ಖಾನಾಪುರ ತಾಲೂಕಿನಲ್ಲಿ ಸತತವಾಗಿ ಮಳೆ ಆಗುತ್ತಿದೆ. ಮಾಚೋಳಿ, ಸಾಥೋಳಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಹಾಲಿನ ಪುಡಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗಿದೆ.
ಹಲಾತ್ರಿ ಹಳ್ಳ ಪ್ರವಾಹದಿಂದ ಮಂತುರ್ಗಾ ಸೇತುವೆ ಮುಳಗುಡೆಯಾಗಿದೆ. ಪರ್ಯಾಯ ವ್ಯವಸ್ಥೆ ಮಾಡಲು ಈಗಾಗಲೆ ಸೂಚನೆ ನೀಡಲಾಗಿದೆ.
ಎಸ್ ಡಿ ಆರ್ ಎಫ್ ತಂಡ ಇಂದಿನಿಂದ ಖಾನಾಪುರದಲ್ಲಿ ಇರಲಿದೆ. ಜಿಲ್ಲೆಯಲ್ಲಿ ಇನ್ನೂ ಯಾವುದೇ ತೊಂದರೆ ಇಲ್ಲ.
ಸಿಎಂ, ಸಚಿವರು, ಅಧಿಕಾರಿಗಳು ಸ್ವತಃ ಬೆಳಗಾವಿ ಜಿಲ್ಲೆಯ ಮಾಹಿತಿಯನ್ನು ಕೇಳುತ್ತಿದ್ದಾರೆ.
ಜಲ ಸಂಪನ್ಮೂಲ ಹಾಗೂ ಕಂದಾಯ ಇಬ್ಬರು ಅಧಿಕಾರಿಗಳು ಕೋಯ್ನಾ ಜಲಾಶಯದಲ್ಲಿ ಇದ್ದಾರೆ.
ಜತ್ರಾಟ್ ಬ್ಯಾರೆಜ್ ನಲ್ಲಿಯೂ ರಾಜ್ಯದ ಒಬ್ಬ ಅಧಿಕಾರಿ ಇದ್ದು, ಕೊಲ್ಹಾಪುರದ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕ ಮಾಡುತ್ತಿದ್ದೇವೆ.
ಇನ್ನೂ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಇದೆ.ಅಮಗಾಂವ್ ನಲ್ಲಿ ಮಹಿಳೆಗೆ ತೀವ್ರ ಅನಾರೋಗ್ಯ ಹಿನ್ನೆಲೆ. ಕಟ್ಟಿಗೆ ಸ್ಟ್ರೇಚರ್ ಮಹಿಳೆ ಚಿಕಲೆಗೆ ರವಾನೆ ವಿಚಾರವಾಗಿ, ಅರಣ್ಯ ಒಳಗೆ ಇರೋ ಜನರಿಗೆ ಔಷಧಿ ನೀಡಲು ಸೂಚನೆ ನೀಡಲಾಗಿದೆ, ಮಳೆ ಕಡಿಮೆಯಾದ ಮೇಲೆ ಕಾಡಂಚಿನ ಜನರಿಗೆ ಪುನರ್ವಸತಿ ಒದಗಿಸಲು ಕ್ರಮ ಜರುಗಿಸಲಾಗುವದು ಎಂದರು.
ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲಾ ಸುತ್ತುವರಿದು ಅವಾಂತರ ಸೃಷ್ಟಿಯಾಗುವ ಹಿನ್ನಲೆಯಲ್ಲಿ ಪಾಲಿಕೆ, ಸ್ಮಾರ್ಟ್ ಸಿಟಿಯಿಂದ ನೀರು ಹೊರ ಹಾಕಲು ಪ್ರಯತ್ನ ಮಾಡುತ್ತೇವೆ. 427 ಕಾಳಜಿ ಕೇಂದ್ರಗಳನ್ನು ಆರಂಭಿಸಲು ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.










