ಮದಬಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ

ಕಾಗವಾಡ :ಮತಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ ಕಾರ್ಯಕ್ರಮ ಜರಗಿತು.

promotions

ಪರಿಷತ್ ಸದಸ್ಯರಾದ ಸನ್ಮಾನ್ಯ ಲಕ್ಷ್ಮಣ ಸವದಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಯೋಜನೆಗಳು, ಜನ ಕಲ್ಯಾಣ ಕಾರ್ಯಗಳು ಎಲ್ಲರಿಗೂ ತಿಳಿಯುವಂತಾಗಬೇಕು. ಬಿಜೆಪಿ ಸಂಘಟನೆಗಾಗಿ ಕಾರ್ಯಕರ್ತರು ಇನ್ನಷ್ಟು ಶ್ರಮ ವಹಿಸಿ ಕೆಲಸ ಮಾಡಬೇಕು ಹಾಗೂ ಮುಂಬರುವ ದಿನಗಳಲ್ಲಿ ತಳವಾರ್ ಸಮಾಜಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಹೇಳಿದರು .

promotions

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮಹೇಶ ತೆಂಗಿನಕಾಯಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ರಾಜೇಶ ನೇರ್ಲಿ,ಮಾಜಿ ವಿ.ಪ. ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಮಾಜಿ ಸಚಿವ ಶ್ರೀ ಶಶಿಕಾಂತ ನಾಯಿಕ, ಶಾಸಕರಾದ ಶ್ರೀ ಶ್ರೀಮಂತ ಪಾಟೀಲ, ಶ್ರೀ ಮಹೇಶ ಕುಮಠಳ್ಳಿ ಸೇರಿದಂತೆ ಹಲವು ಗಣ್ಯಮಾನ್ಯರು, ಚಿಕ್ಕೋಡಿ ಜಿಲ್ಲಾ ಬಿಜೆಪಿ ಎಲ್ಲ ಪದಾಧಿಕಾರಿಗಳು, ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

Read More Articles