ಜ.29ರಂದು ಮುಂಬೈನಲ್ಲಿ ಬೃಹತ್ ಲಿಂಗಾಯತ ರ್ಯಾಲಿ: ಅವಿನಾಶ
- 15 Jan 2024 , 3:54 AM
- Belagavi
- 162
ಬೆಳಗಾವಿ: ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೊರ ರಾಜ್ಯದಲ್ಲಿಯೂ ಹೋರಾಟ ನಡೆಸಲಾಗುತ್ತಿದೆ. ಜ.29 ರಂದು ಮುಂಬೈನಲ್ಲಿ ಲಿಂಗಾಯತ ಬೃಹತ್ ರ್ಯಾಲಿ ನಡೆಸಲಾಗುತ್ತಿದೆ ಎಂದು ಲಿಂಗಾಯತ ಸಮನ್ವಯ ಸಮಿತಿಯ ರಾಷ್ಟ್ರೀಯ ಸಂಯೋಜಕ ಅವಿನಾಶ ಭೂಷಿಕರ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಿಂಗಾಯತ ಧರ್ಮ ಸ್ವತಂತ್ರ ಧರ್ಮದ ಸ್ಥಾನಮಾನ ಸಿಗಬೇಕು ಎನ್ನುವ ಹೋರಾಟ ದೇಶದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಮುಂಬೈನಲ್ಲಿ ಬೃಹತ್ ಲಿಂಗಾಯತ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬೈನ ಆಜಾದ ಮೈದಾನದಲ್ಲಿ ರ್ಯಾಲಿ ನಡೆಸಲಾಗುತ್ತಿದೆ. ಈ ರ್ಯಾಲಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಶಂಕರ ಗುಡಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










