ಮೇ. 02, 03 ಕ್ಕೆ ಬೆಳಗಾವಿಗೆ ಶಿಂದೆ & ಶಾ
- shivaraj bandigi
- 30 Apr 2024 , 1:27 PM
- Belagavi
- 621
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ 3 ರಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಬೆಳಗಾವಿಗೆ ಆಗಮಿಸಲಿದ್ದು, ಮೇ 2 ರಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಅವರು ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದ್ರಿಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೇ 3 ರಂದು ಅಮೀತ್ ಶಾ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿಯಲ್ಲಿ ಮತಯಾಚನೆ ಮಾಡಲಿದ್ದಾರೆ.












