ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಕಡ್ಡಾಯ
- 31 Dec 2023 , 10:22 AM
- Belagavi
- 162
ಬೆಂಗಳೂರು :ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ. ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದು ಸೂಕ್ತವಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.