ಬಿಜೆಪಿಗರಿಗೆ ಸ್ಥಿರ ಸರ್ಕಾರ ಸಹಿಸಿಕೊಳ್ಳಲು ಆಗುತ್ತಿಲ್ಲ ಸಚಿವ ಗುಂಡುರಾವ್

ಬೆಳಗಾವಿ: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಯಾರೂ ಇಲ್ಲವೇ ಇಲ್ಲಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

Your Image Ad

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರ, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

Your Image Ad

ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು.

Your Image Ad

ನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾಳೆ ಏನು ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್ ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು.

Your Image Ad

ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವುದಕ್ಕೆ, ಅವರ ಸೋಷಿಯಲ್‌ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ..? ಸುಳ್ಳು ಸುದ್ದಿ, ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ತಿರುಗೇಟು ನೀಡಿದರು. 

ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ ನಲ್ಲಿ ರಾಜಪಾಲರು ತನಿಖೆಗೆ ಆದೇಶ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಅವರು, ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ದಿನೇಶ ಗುಂಡೂರಾವ್ ಸಮಜಾಯಿಷಿ ನೀಡಿದರು.

ರಾಜಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ಮೇಲೆ ಇರೋ ಭ್ರಷ್ಟಚಾರದ ಕುರಿತ ಅರ್ಜಿ ರಾಜಪಾಲರ ಕಚೇರಿಯಲ್ಲಿ ತಿಂಗಳುಗಟ್ಟಲೇ ಹಾಗೇ ಬಿದ್ದಿದೆ. ರಾಜಪಾಲರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇವಾಗ ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲಿ ರಾಜಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರೋದು ಗೊತ್ತಾಗುತ್ತದೆ ಎಂದರು. 

ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ದೋಷ ಇಲ್ಲವೇ ಇಲ್ಲ. ರಾಜಪಾಲರು ತನಿಖೆಗೆ ಕೊಟ್ಟಿರುವ ಅನುಮತಿ ಸರಿಯೋ ತಪ್ಪೋ ಅನ್ನೋದು ಅಷ್ಟೇ ಕೋರ್ಟ ಮುಂದೆ ಇರೋದು. ಕೋರ್ಟ್ ನಲ್ಲಿ ಸಿಎಂ ತಪ್ಪು ಮಾಡಿದ್ದಾರೆ ಅನ್ನೋದು ಇಲ್ಲವೇ ಇಲ್ಲ ಎಂದು ದಿನೇಶ ಗುಂಡೂರಾವ್ ಪುನರುಚ್ಛರಿಸಿದರು.

ಇಂದು ಖಾನಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುತ್ತಿದ್ದೇನೆ. ಗೋಕಾಕ ನಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಲಿದ್ದೇನೆ ಎಂದ ದಿನೇಶ ಗುಂಡೂರಾವ್, ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ವೈದ್ಯರ ಕೊರತೆ ನಿವಾರಿಸಲು ಪ್ರಯತ್ನಿಸುತ್ತಿದ್ದೇನೆ. ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದ್ದೇವೆ. ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ.ನಕಲಿ ವೈದರು ಎಲ್ಲಾ ಕಡೆಯಿದ್ದಾರೆ. ನಕಲಿ ವೈದ್ಯರ ವಿರುದ್ಧ ಕಾನೂನು ರೀತಿ ಮುಲಾಜಿಲ್ಲದೇ ಕ್ರಮ ಜರುಗಿಸಲು ಹೇಳಿದ್ದೇನೆ. ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು.

Read More Articles