ವಿಪಕ್ಷಗಳು ಮಾಡುತ್ತಿರುವ ಆರೋಪಗಳನ್ನು ತಳ್ಳಿ ಹಾಕಿದ ಮೋದಿ
- shivaraj bandigi
- 15 Apr 2024 , 8:32 PM
- Delhi
- 411
ನವದೆಹಲಿ: ನಾವು ದೊಡ್ಡ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಯಾರೂ ಭಯಪಡುವ ಅವಶ್ಯಕತೆ ಇಲ್ಲ. ದೇಶದ ಹಿತಕ್ಕಾಗಿ ತಮ್ಮ ನಿರ್ಧಾರ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿಗಳು ವಿಪಕ್ಷಗಳ ಭಯ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ವಿಪಕ್ಷಗಳು ಮಾಡುತ್ತಿರುವ ಆರೋಪಗಳನ್ನು ನರೇಂದ್ರ ಮೋದಿ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ.












