ನಾಗ ಪಂಚಮಿಯ ವಿಶೇಷ ಮತ್ತು ಈ ಹಬ್ಬದ ಮಹತ್ವ

ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.

promotions

ನಾಗ ಪಂಚಮಿ ಹಿಂದೂಗಳ ಪ್ರಸಿದ್ಧ ಹಬ್ಬ ಇದನ್ನು ಭಾರತದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಾವುಗಳು ನಮ್ಮ ಸಂಸ್ಕೃತಿಯ ಪ್ರಮುಖ ಭಾಗವಾಗಿವೆ,ಸರ್ಪಗಳನ್ನು ಹೊಂದಿರುವ ಶಿವನನ್ನು ಪೂಜಿಸುವುದನ್ನು ಈ ದಿನ ವಿಶೇಷವಾಗಿ ಮಂಗಳಕರವೆಂದು ಪರಿಗಣಿಸಲಾಗುತ್ತದೆ. 

promotions

ಆತನನ್ನು ಶಕ್ತಿ ಮತ್ತು ಸೂರ್ಯನ ಅವತಾರವೆಂದೂ ಪರಿಗಣಿಸಲಾಗಿದೆ.ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ನಾಗಪೂಜೆ ನಡೆದುಕೊಂಡು ಬಂದಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಪಂಚಮಿಯನ್ನು ನಾಗ ಪಂಚಮಿ ಎಂದು ಆಚರಿಸಲಾಗುತ್ತದೆ, ಆದ್ದರಿಂದ ಇದನ್ನು ‘ನಾಗ ಪಂಚಮಿ’ ಎಂದು ಕರೆಯಲಾಗುತ್ತದೆ. 

promotions

ಈ ದಿನದಂದು ಹಾವುಗಳ ದರ್ಶನವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. 

ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿತ್ತು.

ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ಮಾಣಿಕ್ಯವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಪವಡಿಸಿರುತ್ತಾನೆ.
‘ನಾಗಗಳಲ್ಲಿನ ಶ್ರೇಷ್ಠನಾದ ‘ಅನಂತ’ನೇ ನಾನು’, ಎಂದು ಗೀತೆಯಲ್ಲಿ (೧೦.೨೯) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.

"ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ"|| ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆಯನ್ನು ಮಾಡುತ್ತಾರೆ. 

ಇದರಿಂದ ಸರ್ಪಭಯ ಇರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. 

ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀಕಣಗಳು (ಚೈತನ್ಯ ಕಣಗಳು).
ಭಾವಾರ್ಥ: ‘ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’ - ಪ.ಪೂ. ಪರಶುರಾಮ ಪಾಂಡೇ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.

ನಿಷೇಧ: ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.

ಸರ್ಪ ದೇವರನ್ನು ಮನೆಯ ರಕ್ಷಕ ಎಂದೂ ಪರಿಗಣಿಸಲಾಗುತ್ತದೆ. ಈ ದಿನ ನಾಗ ದೇವರನ್ನು ಪೂಜಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಅದೇ ಸಮಯದಲ್ಲಿ, ನಿಯಮಗಳು ಮತ್ತು ವಿಧಿ - ವಿಧಾನಗಳ ಮೂಲಕ ಪೂಜೆ ಕೈಂಕರ್ಯಗಳನ್ನು ಮಾಡುವುದರಿಂದ, ಮಹಾದೇವನು ಪ್ರಸನ್ನನಾಗುತ್ತಾನೆ ಮತ್ತು ವ್ಯಕ್ತಿಯ ಪ್ರತಿಯೊಂದು ಆಸೆಯನ್ನು ಪೂರೈಸುತ್ತಾನೆ.

Read More Articles