ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ: ಸಿ.ಎಂ.ಆಕ್ರೋಶ
- shivaraj bandigi
- 21 Feb 2024 , 12:55 PM
- Bengaluru
- 348
ಬೆಂಗಳೂರು : ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.
ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ.
ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.










