ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ : ಸಿಎಂ ಸಿದ್ದರಾಮಯ್ಯ
- shivaraj B
- 23 Jul 2024 , 1:45 PM
- Bengaluru
- 3672
ಬೆಂಗಳೂರು : ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.
ಸಂಸತ್ತಿನಲ್ಲಿ ಪ್ರಸ್ತಾಪ ಮಾಡಲಾಗುವುದು
ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದರು.
ಕಾನೂನಿನ ಹೋರಾಟಕೆ ಸಿದ್ಧ
ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್. ಐ ಟಿ ತನಿಖೆ ಮುಗಿದಿದೆ ಎಂದರು.
ತಪ್ಪಿತಸ್ಥರಿಗೆ ಶಿಕ್ಷೆ
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣ ಮಾಡುವುದಿಲ್ಲ ಎಂದರು. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.










