ನಾನ ಸಿಎಂ ಆಗಬೇಕು ಎನ್ನುವುದು ಜನರ ಬಯಕೆ: ಆದರೆ ಪಕ್ಷದ ನಿರ್ಧಾರವೇ ಅಂತಿಮ: ಡಿಕೆಶಿ

ಬೆಳಗಾವಿ : ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಅವರು ಡಿ.ಕೆ.ಶಿವಕುಮಾರ ಸಿಎಂ ಆಗಬೇಕು ಎಂದಿರುವ ಹೇಳಿಕೆಗೆ 
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆ ನೀಡಿದರು.

promotions

ಗುರುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದ ಜನರು ನಮಗೆ ಐದು ವರ್ಷ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ಯಾವಾಗ ತೀರ್ಮಾನ  ಅವರು ಮಾಡುತ್ತಾರೆ. ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಜನರ ಆಸೆ, ಬಯಕೆ, ನಾನು ಸಿಎಂ ಆಗಬೇಕು ಎನ್ನುವುದು ಇರುತ್ತದೆ. ಆ ವಿಚಾರ ಆಮೇಲೆ ನಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.

promotions

Read More Articles