ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನ ಮೊದಲು ಜೈಲಿಗೆ ಹಾಕಿ :ಸಿದ್ದರಾಮಯ್ಯ
- 15 Jan 2024 , 12:38 AM
- Bengaluru
- 195
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ ಎಂದು ಸಿದ್ದು ಪ್ರಶ್ನಿಸಿದ್ದಾರೆ .


ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಸಿದ್ದರಾಮಯ್ಯ ಎಂದು ಗುಡುಗಿದ್ದಾರೆ .










