ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತನ ವಶಕ್ಕೆ ಪಡೆದ ಪೊಲೀಸ್
- shivaraj bandigi
- 7 Feb 2024 , 4:13 PM
- Belagavi
- 530
ಬೆಳಗಾವಿ

ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಬುಧವಾರ ಕಾಂಗ್ರೆಸ್ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಕಾಂಗ್ರೆಸ್ ಕಚೇರಿ ಎದುರು ಬಂದು ಸಂಸದ ಡಿ.ಕೆ.ಸುರೇಶ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಚೇರಿಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಧಿಕಾರ ಕೂಗಿದರು. ಇದರಿಂದ ಕೆರಳಿದ ಬಿಜೆಪಿ ಕಾರ್ಯಕರ್ತ ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದರು.










