ಲೋಕಸೇವಾ ಆಯೋಗದ ಪರೀಕ್ಷೆಗಳಿಗಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
- 5 Jan 2024 , 8:00 PM
- Belagavi
- 228
ಬೆಳಗಾವಿ : ಜಿಲ್ಲೆ ಉಲ್ಲೇಖಿತ ಪತ್ರದಡಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ದಿನಾಂಕ 21.01.2023 ರಂದು ಮುಂಜಾನೆ 10.00 ಗಂಟೆಯಿಂದ ಮದ್ಯಾಹ್ನ 12.00 ವರೆಗೆ ಹಾಗೂ 22.01.2023 ರಂದು ಮುಂಜಾನೆ 10.00 ಗಂಟೆಯಿಂದ 11.30 ಹಾಗೂ ಮದ್ಯಾಹ್ನ 2.00 ಗಂಟೆಯಿಂದ ಸಂಜೆ 04.00 ಗಂಟೆಯವರೆಗೆ ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಬೆಳಗಾವಿ ನಗರದ ಈ ಕೆಳಕಾಣಿಸಿದ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು. ಈ ಪರೀಕ್ಷೆಗಳ ಕಾಲಕ್ಕೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144 ಸಿ.ಆರ್.ಪಿ.ಸಿ ಅಡಿಯಲ್ಲಿ ನಿಷೇದಾಜ್ಞೆ ಹೊರಡಿಸಲು ಕೋರಿರುತ್ತಾರೆ.

ಅ ನಂ ಪರೀಕ್ಷಾ ಕೇಂದ್ರದ ಹೆಸರು

1. GOVT. SARDARS PU COLLEGE KAKATIVES ROAD, BELAGAVI
2. GOVT. HIGH SCHOOL MAHANTESH NAGAR BELAGAVI
3. GOVT. HIGH SCHOOL KANABARAGI, BELAGAVI
4.GOVT. MOULANA AZAD SCHOOL RAMATEERTH NAGAR, BELAGAVI
5. GOVT. CHINTAMANIRAO PU COLLEGE, SHAHAPUR, BELAGAVI
6.GOVT. PRE-UNIVERSITY COLLEGE VADAGAON, JAIL SCHOOL, BELAGAVI
7. GOVT. SARSWATI GIRLS SCHOOL SHAHAPUR, BELAGAVI.
8. GOVT. SARSWATI GIRLS PU COLLEGE # 17, PRIMARY SCHOOL BHARATH NAGAR, NEAR NATH PAI CIRCLE, SHAHAPUR, BELAGAVI.
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಬೆಳಗಾವಿ ನಗರ ಆದ ನಾನು ಡಾ. ಬೋರಲಿಂಗಯ್ಯ ಎಂ. ಪರೀಕ್ಷೆಗಳು ನಿಷ್ಪಕ್ಷಪಾತವಾಗಿ ಹಾಗೂ ಯಾವುದೇ ಅಡೆತಡೆಗಳಲ್ಲದೇ ನಡೆಯುವಂತೆ ನೋಡಿಕೊಳ್ಳಲು ಪರೀಕ್ಷಾ ಬಿ.. ಐಪಿಎಸ್, ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ದಂಡ ಪ್ರಕ್ರಿಯ ಸಂಹಿತೆ (ಸಿ.ಆರ್.ಪಿ.ಸಿ 1973) ಕಲಂ 20 ಮತ್ತು 144 ರ ಪ್ರಕಾರ ಪ್ರದತ್ತವಾದ ಅಧಿಕಾರ ಹೊಂದಿದವನಾಗಿ ಪ್ರಸ್ತಾವನೆಯಲ್ಲಿ ನಮೂದಿಸಿದ 08 ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಗುಂಪುಗುಂಪಾಗಿ ಸೇರುವದನ್ನು ನಿಷೇಧಿಸಿ ದಿನಾಂಕ 21.01.2023 ರಂದು ಮುಂಜಾನೆ 08.00 ಗಂಟೆಯಿಂದ ಮದ್ಯಾಹ್ನ 14.00 ಗಂಟೆಯವರೆಗೆ ಹಾಗೂ ದಿನಾಂಕ: 22.01.2023 ರಂದು ಮುಂಜಾನೆ 08.00 ಗಂಟೆಯಿಂದ 17.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳಕಾಣಿಸಿದ ಪ್ರತಿಬಂಧಗಳೊಂದಿಗೆ ನಿಷೇದಾಜ್ಞೆಯನ್ನು ಹೊರಡಿಸಿರುತ್ತೇನೆ.
1. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
2. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣಿ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ಪ್ರತಿಬಂಧಿಸಲಾಗಿದೆ. ತೆಗೆದುಕೊಂಡು ಹೋಗುವದನ್ನು ಮತ್ತು ತಿರುಗಾಡುವುದನ್ನು
3. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಕಲ್ಲುಗಳನ್ನು ಕ್ಷಾರ ಪದಾರ್ಥ ಇಲ್ಲವೇ ಸ್ಫೋಟಕ ವಸ್ತುಗಳು ಯಾವುದೇ ದಹನಕಾರಿ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
4. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಕಲ್ಲುಗಳು ಮತ್ತು ಎಸೆಯುವಂತಹ ವಸ್ತುಗಳನ್ನು,
ಎಸೆಯುವ ಅಥವಾ ಚಿಮ್ಮುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. 5. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಜರುಗಿಸಲಾಗುವುದು. ಮೇಲೆ ಕಾನೂನು ರೀತ್ಯ ಕ್ರಮ
6. ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಅನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖನ ಕೊಡುವುದು ಸನ್ನೆ ಅಥವಾ ನಕಲ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
7. ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಸೈಬರ್ ಕೆಫೆ, ಝರಾಕ್ಸ್ ಅಂಗಡಿ ಹಾಗೂ ಇನ್ನಿತರ ಅಂತರ್ಜಾ ಕೇಂದ್ರಗಳನ್ನು ನಿಷೇಧಾಜ್ಞೆಯ ಕಾಲಕ್ಕೆ ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ, ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಪಿ.ಐ. ರವರಿಗೆ ಅನುಮತಿ ನೀಡಲಾಗಿದೆ. ಈ ನಿಷೇಧಾಜ್ಞೆಯನ್ನು ಈ ದಿವಸ ಅಂದರೆ ದಿನಾಂಕ: 20/01/2023 ರಂದು ನನ್ನ ಹಸ್ತಾಕ್ಷರ ಹಾಗೂ ಮುದ್ರೆಯೊಂದಿಗೆ ಸಾಗಿಸಲಾಗಿದೆ ಎಂದು ಹೇಳಿದ್ದಾರೆ.










