ಹಿಂದಿ ದಿವಸ ಆಚರಣೆಗೆ ಕರವೇ ವಿರೋಧ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ : ಇಲ್ಲಿನ ಗೋಗಟೆ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ, ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಹೇರಿಕೆ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. 

promotions

ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಸೇರಿ 50ಕ್ಕೂ ಅ ಕರವೇ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದರು.

promotions

ಬೆಳಗಾವಿ ನಗರದ ಗೋಗಟೆ ವೃತ್ತದಲ್ಲಿ ಮರಾಠಿ ಭಾಷೆಯಲ್ಲಿ ಸ್ವಾಗತ ಕೋರಿ ಹಾಕಲಾಗಿದ್ದ ಎನ್ ಸಿಪಿ ವರಿಷ್ಠ ಶರದ್ ಪವಾರ್ ಸ್ವಾಗತ ಕೋರುವ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.

Read More Articles