
ರಾಹುಲ್ ಗಾಂಧಿ ಅಮೇಥಿಯಂತೆ ವಯನಾಡಿನಿಂದಲೂ ಓಡಿಹೋಗುತ್ತಾರೆ: ನರೆಂದ್ರ ಮೋದಿ
- shivaraj bandigi
- 21 Apr 2024 , 7:12 AM
- Kerala
- 220
ಕೇರಳ: ಏಪ್ರಿಲ್ 26ರಂದು ಮತದಾನ ಮುಗಿದ ಬಳಿಕ ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಹುಲ್ ಗಾಂಧಿ ಅಮೇಥಿಯಂತೆ ವಯನಾಡಿನಿಂದಲೂ ಓಡಿಹೋಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಸೋಲು ಒಪ್ಪಿಕೊಂಡಿದೆ. ರಾಹುಲ್ ಗಾಂಧಿ ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಘೋಷನೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

