ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ:ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

ಬೆಂಗಳೂರು:ರಾಜ್ಯ ಸರ್ಕಾರವು ಜನವರಿ 26ರ ಗಣರಾಜ್ಯೋತ್ಸವ ದಿನ ಮತ್ತು ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆಯಂದು ಎಲ್ಲ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸಲು ಆದೇಶಿಸಿದೆ.

promotions

ನವೆಂಬರ್ 26ರ ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸಬೇಕೆಂದು ಸೂಚಿಸಲಾಗಿದೆ.

promotions

Read More Articles