ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತ ಪಟ್ಟ, ಗಾಯಾಳುಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಮನವಿ
- shivaraj B
- 9 Aug 2024 , 3:14 PM
- Belagavi
- 1162
ಬೆಳಗಾವಿ : ಬೆಳಗಾವಿಯ ಸ್ನೇಹಮ್ ಟೇಪ್ ಕಾರ್ಖಾನೆಯಲ್ಲಿ ಇತ್ತಿಚೆಗೆ ನಡೆದ ಅಗ್ನಿ ದುರಂತದಲ್ಲಿ ಮೃತ ಪಟ್ಟ ಕಾರ್ಮಿಕನ ಕುಟುಂಬಕ್ಕೆ ಶಾಶ್ವತ ಪರಿಹಾರ ಕೊಡುವಂತೆ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವದರ ಜೊತೆಗೆ ನ್ಯಾಯಯುತವಾದ ಪರಿಹಾರ ನೀಡುವಂತೆ ಆಗ್ರಹಿಸಿ, ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕ ಸಂಘಟನೆಯ ವತಿಯಿಂದ ಬೆಳಗಾವಿಯ ಕಾರ್ಮಿಕ ಇಲಾಖೆ ಅಧಿಕಾರಿಗೆ ಸಂಘಟನೆಯ ರಾಜ್ಯಾಧ್ಯಕ್ಷ ಮಹೇಶ ಶಿಗೀಹಳ್ಳಿ ಮನವಿ ಮಾಡಿದರು.

ಬರುವ ದಿನಗಳಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಎಲ್ಲ ಕಾರ್ಖಾನೆಗಳು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸುವಂತೆ ಕಾರ್ಮಿಕ ಅಧಿಕಾರಿಗಳು ಎಲ್ಲ ಕಾರ್ಖಾನೆಗಳಿಗೆ ಆದೇಶಿಸಬೇಕು. ಕಾರ್ಮಿಕರಿಗೆ ಸುರಕ್ಷಿತ ಉತ್ತಮ ಗುಣಮಟ್ಟದ ಸಲಕರಣೆಗಳನ್ನು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸ್ನೇಹಮ್ ಕಾರ್ಖಾನೆಯಲ್ಲಿ ಮೃತ ಪಟ್ಟ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ ನ್ಯಾಯ ಸಿಗದೆ ಹೋದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಹಾಗೂ ಕಾರ್ಖಾನೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು
ಈ ಸಂದರ್ಭದಲ್ಲಿ ಸಂಘಟನೆಯ ಬೆಳಗಾವಿಯ ತಾಲೂಕು ಉಪಾಧ್ಯಕ್ಷ ಶಕ್ತಿಕುಮಾರ ಪಿ.ಎಸ್,
ಭರಮಣ್ಣ ಕೊಣಕೇರಿ,ನಿಂಗರಾಜು ದಡ್ಡಿಮಣಿ,ಸಂದೀಪ ನರಸಗೌಡ, ಬಸಪ್ಪ ಧೂಳಪ್ಪಗೊಳ್ ಹಾಗೂ ಪದಾಧಿಕಾರಿಗಳು ಇದ್ದರು.










