ಅನುದಾನಿತ ಶಾಲಾಕಾಲೇಜುಗಳ ನೌಕರರಿಗೆ ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ, ಆರೋಗ್ಯ ಸಂಜೀವಿನಿ ಬೇಡಿಕೆ ಈಡೇರಿಸಲು ಮನವಿ
- 15 Jan 2024 , 7:23 AM
- Belagavi
- 1216
ಬೆಳಗಾವಿ :ನೌಕರರಿಗೆ ರಾಜ್ಯದ ಅನುದಾನಿತ ಶಾಲೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ ಮತ್ತು ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಜಾರಿಗೊಳಿಸಲು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ಸತ್ಯಾಗ್ರಹ 71 ನೇ ದಿನವನ್ನು ತಲುಪಿದೆ.

ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ:01-04-2006 ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಮತ್ತು 01- 04-2006 ಕ್ಕೂ ಪೂರ್ವದಲ್ಲಿ ನೇಮಕಾತಿ ಹೊಂದಿ ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದ ಮತ್ತು ಸೇವಾ ನಿವೃತ್ತಿ ಹೊಂದಿದ ನೌಕರರಿಗೆ ಯಾವುದೇ ವಿಧದ ಪಿಂಚಣಿ ಸೌಲಭ್ಯ ಇರುವುದಿಲ್ಲ. (ಎನ್.ಪಿ.ಎಸ್ ಅಥವಾ ಓ.ಪಿ.ಎಸ್) ಎರಡೂ ಇರುವುದಿಲ್ಲ. ಪಿಂಚಣಿ ಸೌಲಭ್ಯ ದೊರೆಯದೆ ಈಗಾಗಲೇ ಸುಮಾರು 3000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ.

ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕವಾಗಿ ಮರಣಹೊಂದಿದ್ದಾರೆ. ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ.
ನೌಕರರು ವೇತನಾನುದಾನಕ್ಕೆ ಒಳಪಡುವುದಕ್ಕೂ ಪೂರ್ವದ ಸೇವೆಯನ್ನು, ಸೇವೆಗೆ ಸೇರಿದ ದಿನಾಂಕದಿಂದಲೇ ಅನುದಾನ ರಹಿತ ಸೇವೆಯನ್ನು ಪರಿಗಣಿಸಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯವೇ ತೀರ್ಪು ನೀಡಿದ್ದರೂ ಸಹ ಸರ್ಕಾರ ಬೇಡಿಕೆ ಈಡೇರಿಸುತ್ತಿಲ್ಲ.
ಇಡೀ ದೇಶದಲ್ಲಿ ಎಲ್ಲಿಯೂ ಇಲ್ಲದೆ, ಕೇವಲ ಕರ್ನಾಟಕದಲ್ಲಿ ಮಾತ್ರ ಈ ತಾರತಮ್ಯ ಇರುವುದು ಮತ್ತೊಂದು ದುರಂತ. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳು ಅನುಧಾನಿತ ಸಂಸ್ಥೆಗಳ ನೌಕರರಿಗೆ ಪಿಂಚಣಿ ನೀಡುತ್ತಿವೆ ಎಂದು ದೂರಿದ್ದಾರೆ.
ದಿನಾಂಕ:01-04-2006ಕ್ಕೂ ಮೊದಲು ವೇತನಾನುದಾನಕ್ಕೆ ಒಳಪಟ್ಟ ನೌಕರರಿಗೆ ಈಗಲೂ ಸರಕಾರವೇ ಪಿಂಚಣಿ ನೀಡುತ್ತಿದೆ.
ಕರ್ನಾಟಕ ಸರಕಾರದ 6 ನೇ ವೇತನ ಆಯೋಗವು ಅನುದಾನಿತ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಇತ್ತೀಚೆಗೆ ಸ್ವಾಯತ್ತ ವೈದ್ಯಕೀಯ ಶಿಕ್ಷಣ ಜಾರಿಗೊಳಿಸಲಾಗಿದೆ. ಇಲಾಖೆ ನೌಕರರಿಗೆ ಎನ್.ಪಿ.ಎಸ್ ಜಾರಿಗೂ ಮುನ್ನ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡು ಪಿಂಚಣಿ
ತದನಂತರ ನೇಮಕವಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ನೀಡಲಾಗಿದೆ, ಆದರೆ 2004 ಮೊದಲು ನೇಮಕವಾಗಿ ನಂತರ ಆನುದಾನಕ್ಕೊಳಪಟ್ಟ ಅನಾದಾನಿತ ನೌಕರರಿಗೆ ತಾರತಮ್ಯ ಪಿಂಚಣಿ ವಂಚಿತರಾಗಿ ನಿವೃತ್ತಿ ಆಗಿರುವ ನೌಕರರಿಗೆ ವಯೋಸಹಜ ಖಾಯಿಲೆಗಳು ಬಾಧಿಸುತ್ತಿವೆ. ಇವರಿಗೆ ಉದ್ಯೋಗವೂ ಇಲ್ಲ, ನಿವೃತ್ತಿ ವೇತನವೂ ಇಲ್ಲ, ಸರ್ಕಾರದ ಈ ಅನ್ಯಾಯವನ್ನು ಖಂಡಿಸಿ ಈಗಲೇ ರಾಜ್ಯಾದ್ಯಂತ ಅನೇಕ ಹೋರಾಟಗಳನ್ನು ಮಾಡಿ ಗಮನ ಕಳೆಯಲಾಗಿದೆ. ಕಳೆದ ಸಪ್ಟೆಂಬರ್ 20 ರಂದು ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದಾಗಿ ತಿಳಿಸಿದ್ದಾರೆ.
ಒಂದು ವೇಳೆ ಈ ಬೇಡಿಕೆ ಬಗ್ಗೆ ಸರಕಾರ ನಿರ್ಲಕ್ಷ್ಯ ಧೋರಣೆ ತೋರಿ ವಿಳಂಬ ನೀತಿ ಅನುಸರಿಸಿದರೆ ಬರುವ ಡಿಸೆಂಬರ್ 20 ನೇ ತಾರೀಖಿಗೆ ಧರಣಿ ಸತ್ಯಾಗ್ರಹ ಹೋರಾಟ 75 ನೇ ದಿನ ತಲುಪಲಿದೆ. ಅಂದಿನಿಂದ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ರಾಜ್ಯದ್ಯಾಂತ ಇರುವ ಎಲ್ಲ ಅನುದಾನಿತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಎಲ್ಲ ನೌಕರರು ಕುಟುಂಬ ಸಮೇತ ಆಗಮಿಸಿ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.
ಪ್ರಮುಖ ಬೇಡಿಕೆಗಳು
1) ದಿನಾಂಕ: 01-04-2006 ಕ್ಕೂ ಮೊದಲು ನೇಮಕವಾಗಿ ದಿನಾಂಕ: 01-04-2006 ರ ನಂತರ ಅನುದಾನಕ್ಕೊಳಪಟ್ಟ ನೌಕರರ ನೌಕರರ ಅನುದಾಕ್ಕೂ ಪೂರ್ವದ ಸೇವೆಯನ್ನು ಪಿಂಚಣಿಗೆ ಪರಿಗಣಿಸಿ ,ನಿವೃತ್ತಿಯಾದ ದಿನಾಂಕದಂದು ವೇತನ ನಿಗದಿಪಡಿಸಿ "ಹಳೆಯ ನಿಶ್ಚಿತ ಪಿಂಚಣಿ" ಯೋಜನೆ ನೀಡುವುದು, ಈಗಾಗಲೇ ಬರಿಗೈಯಲ್ಲಿ ನಿವೃತ್ತಿ ಹಾಗೂ ನಿಧನ ಹೊಂದಿದ ಕುಟುಂಬಗಳಿಗೆ ಈ ಸೌಲಭ್ಯವನ್ನು ಈ ಕೂಡಲೇ ಜಾರಿಗೆ ತರುವುದು.
2) ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿನಾಂಕ: 01-04-2006 ರ ನಂತರ ನೇಮಕ ಹೊಂದಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರಿಗೆ "ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದು.
3) ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯ ಇಲ್ಲದೇ ಅನುದಾನಿತ ನೌಕರರಿಗೂ ನೀಡುವುದು.










