ಆರ್.ಎಸ್.ಎಸ್. ನಿಷೇಧ ಮಾಡಿ ಎನ್ನುವುದು ದುರ್ದೈವ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್. ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

promotions

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪಿ.ಎಫ್.ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್ ಗೆ ಯಾವ ಆಧಾರಗಳಿಲ್ಲ.ಏಕೆಂದರೆ ಅವರೇ ಪಿ.ಎಫ್.ಐ ಪ್ರಕರಣಗಳನ್ನು ಹಿಂಪಡೆದಿದ್ದರು.

promotions

ಈಗ ಅದನ್ನು ಮರೆಮಾಚಲು ಆರ್.ಎಸ್.ಎಸ್. ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ.

ಆರ್.ಎಸ್.ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.

Read More Articles