ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿದ ಡಿಕೆಶಿ
- 30 Dec 2023 , 6:41 PM
- Bengaluru
- 137

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ನಿಂದ ಪಾದಯಾತ್ರೆ ಮಾಡಬೇಕೆಂದು ಎಐಸಿಸಿ ಸೂಚನೆ ಮೇರೆಗೆ ಕಾರ್ಯಕರ್ತರು ಬೃಹತ್ ಪಾದಯಾತ್ರೆ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ, ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆ ಬಗ್ಗೆ ತಿಳಿಸಿದರು. ಈ ಯಶಸ್ಸಿನ ನಡೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಲಾಯಿತು.











